ಕೀರ್ತನೆಗಳು 44:2 - ಪರಿಶುದ್ದ ಬೈಬಲ್2 ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ. ಅಧ್ಯಾಯವನ್ನು ನೋಡಿ |
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.
ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.