ಕೀರ್ತನೆಗಳು 44:22 - ಪರಿಶುದ್ದ ಬೈಬಲ್22 ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರೇ, ನಾವು ನಿನ್ನ ನಿವಿುತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.