Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:24 - ಪರಿಶುದ್ದ ಬೈಬಲ್‌

24 ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾಕೆ ವಿಮುಖನಾಗಿದ್ದೀ? ನಮಗಿರುವ ಬಾಧೆಯನ್ನೂ ಹಿಂಸೆಯನ್ನೂ ಯಾಕೆ ಲಕ್ಷಿಸುವದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:24
14 ತಿಳಿವುಗಳ ಹೋಲಿಕೆ  

ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು. ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ.


ನಿನ್ನ ವೈರಿಗಳ ಆರ್ಭಟವನ್ನು ಮರೆತುಬಿಡಬೇಡ. ಅವರು ನಿನಗೆ ಪದೇಪದೇ ಅವಮಾನಮಾಡಿದರು.


ದೇವರೇ, ನಿನ್ನ ಪಾರಿವಾಳವನ್ನು ಆ ದುಷ್ಟ ಪ್ರಾಣಿಗಳು ತೆಗೆದುಕೊಳ್ಳದಿರಲಿ. ನಿನ್ನ ಬಡಜನರನ್ನು ಮರೆತುಬಿಡಬೇಡ.


ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.


ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?


ಆದ್ದರಿಂದ ಆ ನಿಸ್ಸಹಾಯಕರು, “ದೇವರು ನಮ್ಮನ್ನು ಮರೆತುಬಿಟ್ಟಿದ್ದ್ದಾನೆ! ನಮಗೆ ಶಾಶ್ವತವಾಗಿ ವಿಮುಖನಾಗಿದ್ದಾನೆ! ನಮಗೆ ಸಂಭವಿಸುತ್ತಿರುವುದನ್ನು ಆತನು ನೋಡುವುದಿಲ್ಲ!” ಎಂದು ಯೋಚಿಸತೊಡಗುವರು.


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


ಎಚ್ಚರಗೊಳ್ಳು! ಎದ್ದೇಳು! ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು.


ಯೆಹೋವನ ಭುಜಬಲವೇ, ಎಚ್ಚರಗೊಳ್ಳು ಎಚ್ಚರಗೊಳ್ಳು, ಬಲವನ್ನು ಹೊಂದಿಕೊ! ಪುರಾತನ ಕಾಲದಲ್ಲಿ ಮಾಡಿದಂತೆಯೇ ನಿನ್ನ ಶಕ್ತಿಯನ್ನು ತೋರು. ನಿನ್ನ ಶಕ್ತಿಯಿಂದ ನೀನು ರಹಬನ್ನು ಸೋಲಿಸಿರುವೆ. ದೈತ್ಯಾಕಾರದ ಮೃಗವನ್ನು ಸೋಲಿಸಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು