Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:25 - ಪರಿಶುದ್ದ ಬೈಬಲ್‌

25 ನಾವು ಧೂಳಿಗೆ ತಳ್ಳಲ್ಪಟ್ಟವರಾಗಿದ್ದೇವೆ. ನಮ್ಮ ಶರೀರವು ನೆಲಕ್ಕೆ ಹತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಮ್ಮ ಪ್ರಾಣವು ಧೂಳಿನಲ್ಲಿ ಅಣಗಿಹೋಗಿದೆ; ಶರೀರವು ನೆಲಕ್ಕೆ ಹತ್ತಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:25
7 ತಿಳಿವುಗಳ ಹೋಲಿಕೆ  

ನನಗೆ ಸಾವು ಸಮೀಪಿಸಿದೆ. ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ.


ಈಗ ನನ್ನ ಕೋಪದ ದೆಸೆಯಿಂದ ನಿನಗೆ ಹಾನಿ ಮಾಡಿದವರನ್ನು ಶಿಕ್ಷಿಸುವೆನು. ಅವರು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದರು. ‘ನಮ್ಮ ಮುಂದೆ ಸಾಷ್ಟಾಂಗಬೀಳು. ಆಗ ನಿನ್ನ ಮೇಲೆ ನಾವು ನಡೆಯುವೆವು’ ಎಂದು ಹೇಳಿದರು. ಅವರಿಗೆ ಅಡ್ಡಬೀಳಲು ನಿನ್ನನ್ನು ಬಲಾತ್ಕರಿಸಿದರು. ಆ ಬಳಿಕ ಅವರು ನೀನು ಮಣ್ಣಿನ ಧೂಳೋ ಎಂಬಂತೆ ನಿನ್ನ ಬೆನ್ನಿನ ಮೇಲೆ ನಡೆದಾಡಿದರು. ನೀನು ಅವರಿಗೆ ನಡೆಯಲು ಬೀದಿಯಾದಿ.”


ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು