Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 44:3 - ಪರಿಶುದ್ದ ಬೈಬಲ್‌

3 ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಬಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 44:3
27 ತಿಳಿವುಗಳ ಹೋಲಿಕೆ  

ನಿಮ್ಮ ಸೈನಿಕರು ಯುದ್ಧಮಾಡಲು ಹೋಗುತ್ತಿರುವಾಗ ನಾನು ಅವರಿಗಿಂತ ಮುಂಚೆಯೇ ಕಡಜದ ಹುಳಗಳ ಗುಂಪನ್ನು ಕಳಿಸಿದ್ದೆ. ಈ ಹುಳಗಳು ಅಮೋರಿಯರ ಅರಸರಿಬ್ಬರನ್ನೂ ಓಡಿಸಿಬಿಟ್ಟವು. ಹೀಗೆ ನೀವು ಖಡ್ಗಗಳನ್ನು ಮತ್ತು ಬಿಲ್ಲುಬಾಣಗಳನ್ನು ಉಪಯೋಗಿಸದೆಯೇ ಆ ಪ್ರದೇಶವನ್ನು ವಶಪಡಿಸಿಕೊಂಡಿರಿ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ. ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.


ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.


ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.


ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


“ಆದರೆ ಯೆಹೋವನು ತನ್ನ ಜನರನ್ನು ಕೈಬಿಡುವುದಿಲ್ಲ. ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನರನ್ನಾಗಿ ಮಾಡಿಕೊಳ್ಳಲು ಇಷ್ಟಪಟ್ಟನು. ಆದ್ದರಿಂದ ಆತನು ತನ್ನ ಮಹಾ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ತ್ಯಜಿಸುವುದಿಲ್ಲ.


ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ!


ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.


“ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.


ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಯೆಹೋವನು ಮೋಶೆಯನ್ನು ತನ್ನ ಬಲವಾದ ಹಸ್ತದಿಂದ ನಡೆಸಿದನು. ತನ್ನ ಅದ್ಭುತ ಶಕ್ತಿಯಿಂದ ಮೋಶೆಯನ್ನು ನಡೆಸಿದನು. ತನ್ನ ಜನರು ಸಮುದ್ರದೊಳಗಿಂದ ನಡೆದುಹೋಗಲೆಂದು ಯೆಹೋವನು ಸಮುದ್ರವನ್ನು ಇಬ್ಭಾಗ ಮಾಡಿದನು. ಅಂಥಾ ಅದ್ಭುತಕಾರ್ಯಗಳ ನಿಮಿತ್ತ ತನ್ನ ಹೆಸರನ್ನು ಪ್ರಸಿದ್ಧಿಪಡಿಸಿದನು.


ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಆತನು ಅನ್ಯಜನಾಂಗಗಳ ದೇಶವನ್ನು ತನ್ನ ಜನರಿಗೆ ಕೊಡುವುದರ ಮೂಲಕ ಪ್ರಬಲವಾದ ಕಾರ್ಯಗಳನ್ನು ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು