ಕೀರ್ತನೆಗಳು 44:7 - ಪರಿಶುದ್ದ ಬೈಬಲ್7 ನೀನು ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದೆ. ನಮ್ಮ ಶತ್ರುಗಳನ್ನು ನಾಚಿಕೆಗೆ ಗುರಿಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಿಂಸಕರಿಂದ ಸಂರಕ್ಷಿಸುವಾತ ನೀನೆ I ಹಗೆಗಳಿಗೆ ಆಶಾಭಂಗ ತರುವಾತ ನೀನೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹಿಂಸಕರಿಂದ ಬಿಡಿಸಿದವನು ನೀನೇ; ನೀನೇ ಹಗೆಗಳಿಗೆ ಆಶಾಭಂಗಪಡಿಸಿದವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ. ಅಧ್ಯಾಯವನ್ನು ನೋಡಿ |
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.