ಕೀರ್ತನೆಗಳು 44:9 - ಪರಿಶುದ್ದ ಬೈಬಲ್9 ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಈಗ ನೀನು ಕೈಬಿಟ್ಟದ್ದರಿಂದ ಅವಮಾನಕ್ಕೆ ಒಳಗಾದೆವಲ್ಲಾ; ನಮ್ಮ ಸೈನ್ಯಗಳ ಸಂಗಡ ನೀನು ಹೊರಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ. ಅಧ್ಯಾಯವನ್ನು ನೋಡಿ |
ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.