ಕೀರ್ತನೆಗಳು 45:15 - ಪರಿಶುದ್ದ ಬೈಬಲ್15 ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ರಾಜನ ಅರಮನೆಯೊಳಕ್ಕೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗಮಿಸುತಿಹರಿದೋ ಸಂಭ್ರಮ ಸಡಗರದಿಂದ I ಪ್ರವೇಶಿಸುತಿಹರು ಅರಮನೆಯನು ಉತ್ಸಾಹದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಸಂಭ್ರಮೋತ್ಸವದಿಂದ ಬಂದು ಅರಮನೆಯೊಳಕ್ಕೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ಆಕೆಯನ್ನು ತರುತ್ತಿದ್ದಾರೆ. ಹೀಗೆ ಅವರು ರಾಜಭವನದೊಳಗೆ ಪ್ರವೇಶಿಸುವರು. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.