Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:17 - ಪರಿಶುದ್ದ ಬೈಬಲ್‌

17 ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು; ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಹೆಸರು ಯಾವಾಗಲೂ ಜ್ಞಾಪಕದಲ್ಲಿರುವಂತೆ ನಾನು ಮಾಡುವೆನು; ಆದದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತಲತಲಾಂತರವೂ ನಿಮ್ಮ ಹೆಸರನ್ನು ನಾನು ಸ್ಮರಿಸುವಂತೆ ಮಾಡುವೆನು. ಆದ್ದರಿಂದ ಜನರು ಯುಗಯುಗಾಂತರವೂ ನಿಮ್ಮನ್ನು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:17
11 ತಿಳಿವುಗಳ ಹೋಲಿಕೆ  

ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರಪಂಚದಾದ್ಯಂತ ಎಲ್ಲೆಲ್ಲಿ ಸುವಾರ್ತೆಯನ್ನು ತಿಳಿಸಲಾಗುವುದೋ ಅಲ್ಲೆಲ್ಲಾ ಈ ಕಾರ್ಯವನ್ನು ಈಕೆಯ ನೆನಪಿಗಾಗಿ ತಿಳಿಸಲಾಗುವುದು” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ: “ನಾನಂತೂ ಆ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡುವೆನು. ನನ್ನ ವಾಗ್ದಾನದ ಮಾತುಗಳೂ ನಾನು ಇರಿಸಿದ ನನ್ನ ಆತ್ಮವೂ ನಿಮ್ಮಿಂದ ಎಂದಿಗೂ ತೊಲಗದು. ಅವು ನಿಮ್ಮ ಮೊಮ್ಮಕ್ಕಳ ತನಕವೂ ಇರುವವು. ಅವು ನಿನ್ನೊಂದಿಗೆ ಈಗಲೂ ಸದಾಕಾಲವೂ ಇರುವವು.


ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು.


ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.


ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು