Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:3 - ಪರಿಶುದ್ದ ಬೈಬಲ್‌

3 ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶೂರನೇ ಮಹಿಮಪ್ರಭಾವಗಳನ್ನು ಧರಿಸಿಕೊಂಡು ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:3
22 ತಿಳಿವುಗಳ ಹೋಲಿಕೆ  

ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ.


ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.


ಆತನ ಎದುರಿನಲ್ಲಿ ಮಹಿಮೆಯೂ ವೈಭವವೂ ಕಂಗೊಳಿಸುತ್ತಿವೆ. ಆತನ ಪವಿತ್ರಾಲಯದಲ್ಲಿ ಶಕ್ತಿಯೂ ಸೌಂದರ್ಯವೂ ತುಂಬಿಕೊಂಡಿವೆ.


ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.


ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.


ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.


ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.


ದೇವರ ಮಹಿಮೆಯು ಆತನಲ್ಲಿ ತೋರಿಬಂದಿತು. ಆತನು ದೇವರ ಸ್ವಭಾವದ ಪ್ರತಿರೂಪವಾಗಿದ್ದಾನೆ. ಆತನು ತನ್ನ ಶಕ್ತಿಯ ಆಜ್ಞೆಯಿಂದ ಪರಿಪಾಲಿಸುತ್ತಿದ್ದಾನೆ. ಆತನು ಜನರನ್ನು ಅವರ ಪಾಪಗಳಿಂದ ಶುದ್ಧಿಮಾಡಿ, ಸ್ವರ್ಗದಲ್ಲಿ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತನಾಗಿ ಎದ್ದುಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು.


ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.


ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.


ನನ್ನ ಆತ್ಮವೇ, ಯೆಹೋವನನ್ನು ಕೊಂಡಾಡು! ಯೆಹೋವನೇ, ನನ್ನ ದೇವರೇ, ನೀನು ಬಹಳ ದೊಡ್ಡವನು! ನೀನು ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಂಡಿರುವೆ.


ದೇವರು ಯೆಹೂದ್ಯ ಜನರೊಂದಿಗೆ ಮಾತಾಡಿದ್ದಾನೆ. ಯೇಸು ಕ್ರಿಸ್ತನ ಮೂಲಕವಾಗಿ ಶಾಂತಿ ಬಂದಿದೆ ಎಂಬ ಸುವಾರ್ತೆಯನ್ನು ದೇವರು ಅವರಿಗೆ ಕಳುಹಿಸಿದನು. ಯೇಸುವು ಎಲ್ಲಾ ಜನರಿಗೆ ಪ್ರಭುವಾಗಿದ್ದಾನೆ!


ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.


ಆ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ಆಕಾಶದಿಂದ ಸಿಡಿಲೊಡೆದು ನಿನ್ನ ಕುರಿಗಳನ್ನೂ ಸೇವಕರುಗಳನ್ನೂ ಸಂಪೂರ್ಣವಾಗಿ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ತಪ್ಪಿಸಿಕೊಂಡೆನು! ಇದನ್ನು ತಿಳಿಸುವುದಕ್ಕಾಗಿಯೇ ನಾನು ಬಂದೆನು” ಎಂದು ಹೇಳಿದನು.


ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.


ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು