ಕೀರ್ತನೆಗಳು 45:7 - ಪರಿಶುದ್ದ ಬೈಬಲ್7 ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.