Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:10 - ಪರಿಶುದ್ದ ಬೈಬಲ್‌

10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿಡಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:10
26 ತಿಳಿವುಗಳ ಹೋಲಿಕೆ  

ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.


ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.


ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.


ಸರ್ವಶಕ್ತನಾದ ಯೆಹೋವನು ನೀತಿಯಿಂದ ನ್ಯಾಯತೀರಿಸುವನು. ಯೆಹೋವನು ಉನ್ನತೋನ್ನತನೆಂದು ಜನರೆಲ್ಲರೂ ಅರಿತುಕೊಳ್ಳುವರು. ಪರಿಶುದ್ಧನಾದ ದೇವರು ನ್ಯಾಯವಾದದ್ದನ್ನೇ ಮಾಡುವನು. ಜನರು ಆತನನ್ನು ಗೌರವಿಸುವರು.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.


ಅದು ಮಧ್ಯಾಹ್ನದ ಯಜ್ಞಗಳನ್ನು ಅರ್ಪಿಸುವ ಸಮಯ. ಪ್ರವಾದಿಯಾದ ಎಲೀಯನು ಯಜ್ಞವೇದಿಕೆಯ ಹತ್ತಿರಕ್ಕೆ ಹೋಗಿ, “ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರಾದ ಯೆಹೋವನೇ, ನೀನು ಇಸ್ರೇಲಿನಲ್ಲಿರುವ ದೇವರೆಂಬುದನ್ನು ರುಜುವಾತುಪಡಿಸಲು ನಾನೀಗ ನಿನ್ನನ್ನು ಪ್ರಾರ್ಥಿಸುತ್ತಿದ್ದೇನೆ. ನಾನು ನಿನ್ನ ಸೇವಕನೆಂಬುದನ್ನೂ ನೀನು ನಿರೂಪಿಸು. ಈ ಕಾರ್ಯಗಳನ್ನೆಲ್ಲಾ ನಾನು ಮಾಡುವಂತೆ ನೀನು ಆಜ್ಞಾಪಿಸಿದೆ ಎನ್ನುವುದನ್ನೂ ಈ ಜನರಿಗೆ ತೋರಿಸು.


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


ಆ ರಾಜ್ಯಗಳ ದೇವರುಗಳು ತಮ್ಮ ಜನರನ್ನು ರಕ್ಷಿಸಲಾಗಲಿಲ್ಲ. ನನ್ನ ಪೂರ್ವಿಕರು ಅವರನ್ನೆಲ್ಲ ನಾಶಗೊಳಿಸಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಮತ್ತು ತೆಲಸ್ಸಾರ್‌ನ ಎದೆನಿನ ಜನರನ್ನು ನಾಶಗೊಳಿಸಿದರು!


ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.


ಯೆಹೋವನು ಹೇಳಿದಂತೆಯೇ ಯೆಹೋಶುವನು ಮಾಡಿದನು. ಯೆಹೋಶುವನು ಅವರ ಕುದುರೆಯ ಕಾಲುಗಳನ್ನು ಕತ್ತರಿಸಿದನು; ಅವರ ರಥಗಳನ್ನು ಸುಟ್ಟುಹಾಕಿದನು.


ಶಕ್ತಿಶಾಲಿ ಯೋಧರ ಬಿಲ್ಲುಗಳು ಮುರಿದುಹೋಗುತ್ತವೆ. ಬಲಹೀನರು ಶಕ್ತಿವಂತರಾಗುವರು.


ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.


ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ.


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ಅತಿ ಶೀಘ್ರದಲ್ಲಿ ಏಲಾಮಿನ ಬಿಲ್ಲನ್ನು ಮುರಿದುಹಾಕುವೆನು. ಏಲಾಮಿಗೆ ಬಿಲ್ಲು ಬಹು ಮುಖ್ಯವಾದ ಆಯುಧವಾಗಿದೆ.


ಈಜಿಪ್ಟಿನಲ್ಲಿ ನಾನು ಹೊತ್ತಿಸಿದ ಬೆಂಕಿಯು ಅದರ ಸಹಾಯಕರನ್ನು ದಹಿಸುವದು. ಆಗ ನಾನು ಯೆಹೋವನೆಂದು ಅವರು ತಿಳಿಯುವರು.


ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವೆನು, ಆಗ ನಿನ್ನ ಬಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು!


ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು