ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.
ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ.
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.
ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.