Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:5 - ಪರಿಶುದ್ದ ಬೈಬಲ್‌

5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:5
24 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ಆ ನಗರಕ್ಕೆ ಮಹಿಮೆಯನ್ನು ತರುವೆನು.’”


ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.”


ಯಾಕೆಂದರೆ ನಿನ್ನ ಯೆಹೋವನು ನಿನ್ನ ಶಿಕ್ಷೆಯನ್ನು ನಿಲ್ಲಿಸಿದ್ದಾನೆ. ನಿನ್ನ ವೈರಿಗಳ ಬಲವಾದ ಬುರುಜುಗಳನ್ನು ನಾಶಮಾಡಿದ್ದಾನೆ. ಇಸ್ರೇಲಿನ ರಾಜನೇ, ನಿನ್ನ ದೇವರು ನಿನ್ನೊಂದಿಗಿದ್ದಾನೆ. ನಿನಗೆ ಕೆಟ್ಟದ್ದು ಸಂಭವಿಸುತ್ತದೆಂದು ನೀನು ಚಿಂತಿಸದಿರು.


ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.


ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೋ ಅವರ ಮಧ್ಯದಲ್ಲಿ ನಾನಿರುತ್ತೇನೆ.”


ಯೆಹೋವನು ಹೇಳುವುದೇನೆಂದರೆ, “ನಾನು ಚೀಯೋನಿಗೆ ಹಿಂದಿರುಗಿ ಬಂದಿದ್ದೇನೆ. ನಾನು ಜೆರುಸಲೇಮಿನಲ್ಲಿ ವಾಸಿಸುತ್ತೇನೆ. ಜೆರುಸಲೇಮ್ ನಂಬಿಗಸ್ತನಗರವೆಂದು ಕರೆಯಲ್ಪಡುವುದು. ಸರ್ವಶಕ್ತನ ಪರ್ವತವು ಪವಿತ್ರ ಪರ್ವತವೆಂದು ಕರೆಯಲ್ಪಡುವುದು.”


ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನ್ನೂ ನನ್ನಿಂದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.


ಆತನೇ ನನಗೆ ಬಂಡೆಯೂ ರಕ್ಷಣೆಯೂ ಆಶ್ರಯದುರ್ಗವೂ ಆಗಿದ್ದಾನೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.


ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.


ನನ್ನ ಭಯಂಕರವಾದ ಕೋಪವು ಮೇಲುಗೈ ಸಾಧಿಸುವದಿಲ್ಲ. ಎಫ್ರಾಯೀಮನನ್ನು ನಾನು ತಿರುಗಿ ನಾಶಮಾಡುವದಿಲ್ಲ. ನಾನು ದೇವರು, ನರಮನುಷ್ಯನಲ್ಲ. ನಾನು ಪವಿತ್ರನು, ನಿನ್ನೊಂದಿಗಿರುವೆನು. ನನ್ನ ಕೋಪವನ್ನು ಪ್ರದರ್ಶಿಸೆನು.


ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.


ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.


ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


“ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.


ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.


ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.


ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು