Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:6 - ಪರಿಶುದ್ದ ಬೈಬಲ್‌

6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:6
34 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಸರ್ವಶಕ್ತನಾದ ಯೆಹೋವನು ಭೂಮಿಯನ್ನು ಸ್ಪರ್ಶಿಸುವನು. ಆಗ ಅದು ಕರಗಿಹೋಗುವುದು. ದೇಶದಲ್ಲಿ ವಾಸಿಸುವ ಜನರೆಲ್ಲಾ ಸತ್ತುಹೋದವರಿಗಾಗಿ ಗೋಳಾಡುವರು. ಈಜಿಪ್ಟಿನ ನೈಲ್ ನದಿಯಂತೆ ದೇಶದಲ್ಲಿ ಏರಿಳಿತ ಉಂಟಾಗುವುದು.


ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.


ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು.


ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು, ಆಗ ಉಳುವವನು ಕೊಯ್ಯುವವನನ್ನೇ ಮೀರಿಸಿ ಮುಂದೆ ಹೋಗುವನು. ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ ಮೀರಿಸಿ ಮುಂದೆ ಹೋಗುವನು. ಬೆಟ್ಟಗಳಿಂದಲೂ ಪರ್ವತಗಳಿಂದಲೂ ಸಿಹಿ ದ್ರಾಕ್ಷಾರಸವು ಹರಿದುಬರುವುದು.


ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”


“ಯೆರೆಮೀಯನೇ, ನೀನು ಅವರಿಗೆ ಈ ಸಂದೇಶವನ್ನು ಕೊಡು: ‘ಉನ್ನತವಾದ ಮತ್ತು ಪವಿತ್ರವಾದ ಆಲಯದಿಂದ ಯೆಹೋವನು ಗರ್ಜಿಸುವನು. ಯೆಹೋವನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಲುಗಾವಲಿನ ಮಂದೆಯನ್ನು ಬೆದರಿಸುವನು. ದ್ರಾಕ್ಷಾರಸವನ್ನು ತಯಾರಿಸುವಾಗ ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭಯಂಕರವಾಗಿ ಕೂಗುವನು.


ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ.


ದೇವರಿಗೆ ಗಾಯನ ಮಾಡಿರಿ! ಅನಾದಿಕಾಲದಿಂದಿರುವ ಆತನು ಮಹೋನ್ನತವಾದ ಆಕಾಶದಲ್ಲಿ ರಥಾಶ್ವರೂಢನಾಗಿ ಸವಾರಿ ಮಾಡುವನು. ಆತನ ಗರ್ಜನೆಗೆ ಕಿವಿಗೊಡಿರಿ!


ಭೂಮಿಯೇ ಕಂಪಿಸಿತು. ಇಸ್ರೇಲರ ದೇವಾಧಿದೇವನು ಸೀನಾಯಿ ಬೆಟ್ಟಕ್ಕೆ ಬಂದಾಗ ಆಕಾಶವೇ ಕರಗಿಹೋಯಿತು.


ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.


ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.


ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.


ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


“ನಗರದ ಸುತ್ತಳತೆಯು ಹದಿನೆಂಟು ಸಾವಿರ ಮೊಳ. ಇಂದಿನಿಂದ ಈ ನಗರದ ಹೆಸರು ‘ಯೆಹೋವನು ಅಲ್ಲಿದ್ದಾನೆ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು