ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.
ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.
ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.
ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.