ಕೀರ್ತನೆಗಳು 47:5 - ಪರಿಶುದ್ದ ಬೈಬಲ್5 ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.