ಕೀರ್ತನೆಗಳು 47:9 - ಪರಿಶುದ್ದ ಬೈಬಲ್9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜನಾಂಗಗಳಲ್ಲಿ ಶ್ರೇಷ್ಠರಾದವರು ಅಬ್ರಹಾಮನ ದೇವರ ಪ್ರಜೆಯಾಗಿರುವದಕ್ಕೆ ಕೂಡಿಬರುತ್ತಾರೆ; ಯಾಕಂದರೆ ಭೂಪಾಲಕರೆಲ್ಲಾ ದೇವರಿಗೇ ಅಧೀನರಾಗಿದ್ದಾರೆ. ಆತನೇ ಸರ್ವೋನ್ನತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.