ಕೀರ್ತನೆಗಳು 48:10 - ಪರಿಶುದ್ದ ಬೈಬಲ್10 ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿನ್ನ ನಾಮದಂತೆ ನಿನ್ನಾ ಹೊಗಳಿಕೆ I ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ I ದೇವಾ, ನೀತಿಭರಿತ ನಿನ್ನ ಆಳ್ವಿಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ನಾವು ನಿನ್ನ ಆಲಯದಲ್ಲಿ ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ ಲೋಕವೆಲ್ಲಾ ನಿನ್ನನ್ನು ಹೊಗಳುವದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.