ಕೀರ್ತನೆಗಳು 48:2 - ಪರಿಶುದ್ದ ಬೈಬಲ್2 ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ ರಮ್ಯವಾಗಿಯೂ ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.