Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 48:8 - ಪರಿಶುದ್ದ ಬೈಬಲ್‌

8 ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 48:8
11 ತಿಳಿವುಗಳ ಹೋಲಿಕೆ  

ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.


ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು.


ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.


ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಆ ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ.


ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು