ಕೀರ್ತನೆಗಳು 49:13 - ಪರಿಶುದ್ದ ಬೈಬಲ್13 ತಮ್ಮ ಐಶ್ವರ್ಯವನ್ನು ಮೆಚ್ಚಿಕೊಂಡಿರುವ ಬುದ್ಧಿಹೀನರಿಗೆ ಇದೇ ಗತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೂಢನಂಬಿಕೆಯುಳ್ಳವರ ಗತಿ ಇದುವೇ I ಆ ಮೂಢರ ನಂಬಿ ನಡೆದವರಿಗು ಹಾಗೆಯೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಮ್ಮಲ್ಲಿಯೇ ಭರವಸೆ ಇಟ್ಟುಕೊಳ್ಳುವವರಿಗೂ ಇದೇ ಗತಿ. ಅಂಥವರ ಮಾತುಗಳನ್ನು ಒಪ್ಪಿ ಅನುಸರಿಸುವವರ ಗತಿಯೂ ಇದೆ. ಅಧ್ಯಾಯವನ್ನು ನೋಡಿ |
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.