ಕೀರ್ತನೆಗಳು 49:14 - ಪರಿಶುದ್ದ ಬೈಬಲ್14 ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು. ಅಧ್ಯಾಯವನ್ನು ನೋಡಿ |