ಕೀರ್ತನೆಗಳು 5:10 - ಪರಿಶುದ್ದ ಬೈಬಲ್10 ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದವರು; ಆದದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವದರಿಂದ ಅವರನ್ನು ದೊಬ್ಬಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅಧ್ಯಾಯವನ್ನು ನೋಡಿ |
ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”
ನಾಬಾಲನು ಸತ್ತನೆಂಬುದು ದಾವೀದನಿಗೆ ತಿಳಿಯಿತು. ದಾವೀದನು, “ಯೆಹೋವನಿಗೆ ಸ್ತೋತ್ರವಾಗಲಿ! ನಾಬಾಲನು ನನ್ನ ಬಗ್ಗೆ ಕೆಟ್ಟಮಾತುಗಳನ್ನು ಆಡಿದನು, ಆದರೆ ಯೆಹೋವನು ನನಗೆ ಸಹಾಯ ಮಾಡಿದನು. ನಾನು ತಪ್ಪುಮಾಡದಂತೆ ಯೆಹೋವನು ನನ್ನನ್ನು ತಡೆದನು. ನಾಬಾಲನು ಕೆಟ್ಟದನ್ನು ಮಾಡಿದ್ದರಿಂದ ಯೆಹೋವನು ಅವನಿಗೆ ಸಾವನ್ನು ಬರಮಾಡಿದನು” ಎಂದು ಹೇಳಿದನು. ನಂತರ ದಾವೀದನು ಅಬೀಗೈಲಳಿಗೆ ಒಂದು ಸಂದೇಶವನ್ನು ಕಳುಹಿಸಿ ತನ್ನ ಹೆಂಡತಿಯಾಗಬೇಕೆಂದು ಕೇಳಿಕೊಂಡನು.