Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:12 - ಪರಿಶುದ್ದ ಬೈಬಲ್‌

12 ಯೆಹೋವನೇ, ನೀನು ನೀತಿವಂತರಿಗೆ ಒಳ್ಳೆಯದನ್ನೇ ಮಾಡುವೆ; ನೀನು ಅವರನ್ನು ವಿಶಾಲವಾದ ಗುರಾಣಿಯಂತೆ ಸಂರಕ್ಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ನಿನ್ನನ್ನು ಮರೆಹೊಕ್ಕವರೆಲ್ಲರು ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:12
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.


ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!


ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.


ನನ್ನನ್ನು ನೋಡಿ ಕರುಣಿಸು. ನಿನ್ನ ಹೆಸರನ್ನು ಪ್ರೀತಿಸುವವರಿಗೆ ಯೋಗ್ಯವಾದುವುಗಳನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು