ಕೀರ್ತನೆಗಳು 5:7 - ಪರಿಶುದ್ದ ಬೈಬಲ್7 ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.