Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:1 - ಪರಿಶುದ್ದ ಬೈಬಲ್‌

1 ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:1
35 ತಿಳಿವುಗಳ ಹೋಲಿಕೆ  

ಪೂರ್ವದಿಂದಿಡಿದು ಪಶ್ಚಿಮದವರೆಗೂ ಯೆಹೋವನ ಹೆಸರು ಸ್ತುತಿಸಲ್ಪಡಲಿ.


ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


ಭೂಮ್ಯಾಕಾಶಗಳೇ, ಯೆಹೋವನ ಮಾತನ್ನು ಆಲಿಸಿರಿ! ಯೆಹೋವನು ಹೇಳುತ್ತಿದ್ದಾನೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.


ಯಾಕೆಂದರೆ ನಿನ್ನ ಗಂಡನೇ (ದೇವರು) ನಿನ್ನನ್ನು ನಿರ್ಮಿಸಿದನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಇಸ್ರೇಲನ್ನು ಕಾಪಾಡುವಾತನಾಗಿದ್ದಾನೆ. ಆತನು ಇಸ್ರೇಲಿನ ಪರಿಶುದ್ಧ ದೇವರಾಗಿದ್ದಾನೆ. ಆತನನ್ನು ‘ಇಡೀ ಭೂಲೋಕದ ದೇವರು’ ಎಂದು ಕರೆಯುವರು.


ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.


ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ! ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು.


ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.


ಆಸಾಫನ ಸಂತತಿಯಲ್ಲಿ: ಜಕ್ಕೂರ್, ಯೋಸೇಫ್, ನೆತನ್ಯ ಮತ್ತು ಅಶರೇಲ, ಅರಸನಾದ ದಾವೀದನು ಆಸಾಫನನ್ನು ಪ್ರವಾದಿಸುವುದಕ್ಕಾಗಿ ಆರಿಸಿಕೊಂಡನು. ಆಸಾಫನು ತನ್ನ ಮಕ್ಕಳಿಗೂ ಮಾರ್ಗದರ್ಶನ ನೀಡಿದನು.


ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.


ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು.


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.


ಅಸ್ಸೀರನ ಮಗನು ತಹತ. ಊರೀಯೇಲ್ ತಹತನ ಮಗನು. ಉಜ್ಜೀಯನು ಊರೀಯೇಲನ ಮಗನು. ಸೌಲನು ಉಜ್ಜೀಯನ ಮಗನು.


ದೇವರೇ, ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವೆಯಾ? ನಿನ್ನ ಜನರ ಮೇಲೆ ಇನ್ನೂ ಕೋಪದಿಂದಿರುವೆಯಾ?


ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.


ಯೆಹೂದದ ಜನರು ದೇವರನ್ನು ಬಲ್ಲವರೇ ಸರಿ! ಇಸ್ರೇಲಿನ ಜನರು ಆತನ ನಾಮವನ್ನು ಗೌರವಿಸುವರು.


ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.


ನನ್ನ ಜನರೇ, ನನ್ನ ಉಪದೇಶಗಳಿಗೆ ಕಿವಿಗೊಡಿರಿ; ನನ್ನ ನುಡಿಗಳನ್ನು ಲಾಲಿಸಿರಿ.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ನಮಗೆ ಬಲಪ್ರದನಾಗಿರುವ ದೇವರಿಗೆ ಸಂತಸದಿಂದ ಹಾಡಿರಿ. ಇಸ್ರೇಲಿನ ದೇವರಿಗೆ ಆನಂದಘೋಷ ಮಾಡಿರಿ.


ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು