ಕೀರ್ತನೆಗಳು 50:18 - ಪರಿಶುದ್ದ ಬೈಬಲ್18 ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀವು ಚೋರರೊಡನೆ ಸಂತೋಷದಿಂದ ಸೇರುತ್ತೀರಿ; ಜಾರರ ಒಡನಾಟವೇ ನಿಮಗೆ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ. ಅಧ್ಯಾಯವನ್ನು ನೋಡಿ |
ಯೋನಾದಾಬನು ಅಮ್ನೋನನಿಗೆ, “ನೀನು ಹೋಗಿ ಹಾಸಿಗೆಯಲ್ಲಿ ಮಲಗಿಕೋ. ನೀನು ಕಾಯಿಲೆಯವನಂತೆ ನಟಿಸು. ಆಗ ನಿನ್ನನ್ನು ನೋಡಲು ನಿನ್ನ ತಂದೆಯು ಬರುತ್ತಾನೆ. ಆಗ ನೀನು ಅವನಿಗೆ, ‘ದಯವಿಟ್ಟು ನನ್ನ ಸೋದರಿಯಾದ ತಾಮಾರಳು ಇಲ್ಲಿಗೆ ಬಂದು, ನನಗೆ ಊಟವನ್ನು ಕೊಡಲಿ. ಅವಳು ನನ್ನ ಎದುರಿನಲ್ಲೇ ಅಡಿಗೆಯನ್ನು ಮಾಡಲಿ. ನಾನು ಅದನ್ನು ಕಣ್ಣಾರೆ ಕಂಡು ಅವಳ ಕೈಗಳಿಂದ ಊಟಮಾಡುತ್ತೇನೆ’ ಎಂದು ಹೇಳು” ಎಂಬುದಾಗಿ ಹೇಳಿಕೊಟ್ಟನು.