Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:20 - ಪರಿಶುದ್ದ ಬೈಬಲ್‌

20 ಬೇರೆಯವರ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಕೆಟ್ಟದ್ದನ್ನು ಹೇಳುತ್ತಲೇ ಇರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸಹೋದರನನ್ನು ಕ್ಷುದ್ರಮಾಡುತ್ತಾ ಕೂತುಕೊಳ್ಳುತ್ತೀರಿ; ಒಡಹುಟ್ಟಿದವರನ್ನು ದೂರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:20
9 ತಿಳಿವುಗಳ ಹೋಲಿಕೆ  

“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.


ದ್ವೇಷವನ್ನು ಮರೆಮಾಡಲು ಒಬ್ಬನು ಸುಳ್ಳು ಹೇಳಬೇಕಾಗಬಹುದು. ಆದರೆ ಹರಟೆಗಾರನು ನಿಜವಾಗಿಯೂ ಮೂಢನಾಗಿದ್ದಾನೆ.


ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!


ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.


“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.


ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. ಅವರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.


ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.


ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.


ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು