ಕೀರ್ತನೆಗಳು 50:21 - ಪರಿಶುದ್ದ ಬೈಬಲ್21 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು. ಅಧ್ಯಾಯವನ್ನು ನೋಡಿ |