Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:23 - ಪರಿಶುದ್ದ ಬೈಬಲ್‌

23 ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:23
31 ತಿಳಿವುಗಳ ಹೋಲಿಕೆ  

ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”


ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು!


ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ಅದೇನೇ ಇರಲಿ, ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ಬಾಳಿರಿ. ಆಗ ನಾನು ನಿಮ್ಮ ಬಳಿಗೆ ಬಂದರೂ ಸರಿ, ನಿಮ್ಮಿಂದ ದೂರದಲ್ಲಿದ್ದರೂ ಸರಿ, ನಿಮ್ಮ ವಿಷಯದಲ್ಲಿ ಒಳ್ಳೆಯ ಸಂಗತಿಗಳನ್ನು ಕೇಳುತ್ತೇನೆ. ನೀವು ಒಂದೇ ಉದ್ದೇಶದಿಂದ ದೃಢವಾಗಿದ್ದೀರೆಂದೂ ಸುವಾರ್ತೆಯಿಂದ ಉಂಟಾದ ನಂಬಿಕೆಗೋಸ್ಕರ ಏಕಮನಸ್ಸಿನಿಂದ ಕೆಲಸ ಮಾಡುತ್ತಿದ್ದೀರೆಂದೂ ಕೇಳುತ್ತಲೇ ಇರುತ್ತೇನೆ.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ನೀನು ದಯಪಾಲಿಸಿದ ರಕ್ಷಕನನ್ನು ಕಣ್ಣಾರೆಕಂಡೆನು.


ನೀತಿಯು ಆತನ ಮುಂದೆ ಹೋಗುತ್ತಾ ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದು.


ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು.


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ದೇವರು ಪರಿಶುದ್ಧನಾಗಿರುವಂತೆ ನಿಮ್ಮ ನಡೆನುಡಿಗಳು ಪರಿಶುದ್ಧವಾಗಿರಲಿ. ನಿಮ್ಮನ್ನು ಕರೆದಾತನು ದೇವರೇ.


ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ.


ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ: “ಆದ್ದರಿಂದ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ನಾನು ನಿನ್ನನ್ನು ಸ್ತುತಿಸುವೆನು: ನಾನು ನಿನ್ನ ಹೆಸರನ್ನು ಸಂಕೀರ್ತಿಸುವೆನು.”


ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.


ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.


ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.


ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ! ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ!


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು. ಅವರಿಗೆ ಆಶಾಭಂಗವಾಗದು.


ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು