ಕೀರ್ತನೆಗಳು 50:7 - ಪರಿಶುದ್ದ ಬೈಬಲ್7 ದೇವರು ಹೀಗೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 [ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.