ಕೀರ್ತನೆಗಳು 51:10 - ಪರಿಶುದ್ದ ಬೈಬಲ್10 ದೇವರೇ, ನನ್ನಲ್ಲಿ ಶುದ್ಧ ಹೃದಯವನ್ನು ನಿರ್ಮಿಸು! ನನ್ನ ಆತ್ಮವನ್ನು ಮತ್ತೆ ಬಲಗೊಳಿಸಿ ನನ್ನನ್ನು ನೂತನಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನ ಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ. ಅಧ್ಯಾಯವನ್ನು ನೋಡಿ |
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.