ಕೀರ್ತನೆಗಳು 51:12 - ಪರಿಶುದ್ದ ಬೈಬಲ್12 ನಿನ್ನ ರಕ್ಷಣೆಯಿಂದುಂಟಾಗುವ ಆನಂದವನ್ನು ನನಗೆ ಮತ್ತೆ ದಯಪಾಲಿಸು! ನಿನಗೆ ವಿಧೇಯನಾಗಿರಲು ನನ್ನ ಮನಸ್ಸನ್ನು ದೃಢಪಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ. ಅಧ್ಯಾಯವನ್ನು ನೋಡಿ |
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.