ಕೀರ್ತನೆಗಳು 51:14 - ಪರಿಶುದ್ದ ಬೈಬಲ್14 ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು. ಅಧ್ಯಾಯವನ್ನು ನೋಡಿ |
ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.