Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:16 - ಪರಿಶುದ್ದ ಬೈಬಲ್‌

16 ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:16
19 ತಿಳಿವುಗಳ ಹೋಲಿಕೆ  

ನಾನು ಗ್ರಹಿಸಿಕೊಂಡಿದ್ದೇನೆಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ದೇವರೇ, ನಾನು ನಿನಗೆ ನಂಬಿಗಸ್ತನಾಗಿರಬೇಕೆಂಬುದೇ ನಿನ್ನ ಅಪೇಕ್ಷೆ. ಆದ್ದರಿಂದ ಸುಜ್ಞಾನದ ರಹಸ್ಯಗಳನ್ನು ನನಗೆ ಉಪದೇಶಿಸು.


ಕೆಡುಕನ ಯಜ್ಞಗಳು ಯೆಹೋವನಿಗೆ ಅಸಹ್ಯ. ಯಾಕೆಂದರೆ ಅವು ದುರುದ್ದೇಶದಿಂದ ಕೂಡಿವೆ.


ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.


ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.


“ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.


“ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.


“ಆದರೆ ಒಬ್ಬನು ತಿಳಿಯದೆ ಪಾಪಮಾಡಿದರೆ, ಅವನು ಒಂದು ವರ್ಷದ ಹೆಣ್ಣು ಆಡನ್ನು ದೋಷ ಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.


“ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು