Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:17 - ಪರಿಶುದ್ದ ಬೈಬಲ್‌

17 ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:17
25 ತಿಳಿವುಗಳ ಹೋಲಿಕೆ  

ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.


ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.


“ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.


“ನಿಮ್ಮ ಆರಾಧನಾ ದಿವಸಗಳನ್ನು ನಾನು ದ್ವೇಷಿಸುತ್ತೇನೆ. ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಧಾರ್ಮಿಕ ಕೂಟಗಳಲ್ಲಿ ನಾನು ಸಂತೋಷಿಸುವದಿಲ್ಲ.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು