ಕೀರ್ತನೆಗಳು 51:18 - ಪರಿಶುದ್ದ ಬೈಬಲ್18 ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ. ಅಧ್ಯಾಯವನ್ನು ನೋಡಿ |
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.
“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.
ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.