ಕೀರ್ತನೆಗಳು 51:4 - ಪರಿಶುದ್ದ ಬೈಬಲ್4 ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ. ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.