ಕೀರ್ತನೆಗಳು 53:1 - ಪರಿಶುದ್ದ ಬೈಬಲ್1 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿ |
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.