ಕೀರ್ತನೆಗಳು 53:4 - ಪರಿಶುದ್ದ ಬೈಬಲ್4 ದೇವರು ಹೀಗೆನ್ನುತ್ತಾನೆ: “ಆ ದುಷ್ಟರಿಗೆ ಖಂಡಿತವಾಗಿ ಸತ್ಯವು ತಿಳಿದಿದೆ! ಆದರೆ ಅವರು ನನ್ನಲ್ಲಿ ಪ್ರಾರ್ಥಿಸುತ್ತಿಲ್ಲ. ಆಹಾರ ತಿನ್ನುವಂತೆ ಅವರು ನನ್ನ ಜನರನ್ನು ನಾಶಮಾಡಲು ಸಿದ್ಧರಾಗಿದ್ದಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದುಷ್ಟತ್ವವನ್ನು ನಡಿಸುವವರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ದೇವರನ್ನು ಸ್ಮರಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿ |