Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:5 - ಪರಿಶುದ್ದ ಬೈಬಲ್‌

5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:5
22 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಇಸ್ರೇಲ್ ಜನರ ಸತ್ತ ಹೆಣಗಳನ್ನು ಅವರ ಹೊಲಸು ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಎಲುಬುಗಳನ್ನು ನಿಮ್ಮ ಯಜ್ಞವೇದಿಗಳ ಸುತ್ತಲೂ ಹರಡುವೆನು.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ಜನರು ಹೊಲವನ್ನು ಉತ್ತು ಹೆಂಟೆಗಳನ್ನು ಪುಡಿಮಾಡಿ ಚದರಿಸುವಂತೆಯೇ ಕೆಟ್ಟವರ ಎಲುಬುಗಳು ಅವರ ಸಮಾಧಿಗಳಲ್ಲಿ ಹರಡಿಕೊಂಡಿರುತ್ತವೆ.


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು. ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ ನೀನು ಅವರನ್ನು ಮಾಯಗೊಳಿಸುವೆ.


ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.


ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.


ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.


ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.


ಭೀಕರವಾದ ಶಬ್ದಗಳು ಅವನ ಕಿವಿಗಳಲ್ಲೇ ಇರುತ್ತವೆ. ತಾನು ಸುರಕ್ಷಿತನಾಗಿರುವುದಾಗಿ ಅವನು ಯೋಚಿಸುವಾಗಲೇ ವೈರಿಯು ಅವನ ಮೇಲೆ ಆಕ್ರಮಣ ಮಾಡುವನು.


ಎದೋಮೇ, ನಾನು ನಿನಗೆ ಪ್ರಮುಖನಾಗಲು ಬಿಡುವುದಿಲ್ಲ. ಪ್ರತಿಯೊಬ್ಬರು ನಿನ್ನನ್ನು ದ್ವೇಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು