Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:6 - ಪರಿಶುದ್ದ ಬೈಬಲ್‌

6 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ದುರವಸ್ಥೆಯಿಂದ ತಪ್ಪಿಸಿದಾಗ ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲ್ಯರು ಹರ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:6
18 ತಿಳಿವುಗಳ ಹೋಲಿಕೆ  

ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.


ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.


ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.


ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.


“ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.


ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’


ಸೌಂದರ್ಯದಿಂದ ಕಂಗೊಳಿಸುತ್ತಿರುವ ಚೀಯೋನಿನಲ್ಲಿ ದೇವರು ಪ್ರಕಾಶಿಸುತ್ತಾನೆ.


ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಮೇಲೆ ಯೆಹೋವನು ಯೋಬನನ್ನು ಅಭಿವೃದ್ಧಿಪಡಿಸಿದನು. ಆತನು ಯೋಬನಿಗೆ, ಮೊದಲಿಗಿಂತ ಎರಡರಷ್ಟು ಹೆಚ್ಚಿಗೆ ಆಸ್ತಿಯನ್ನು ಕೊಟ್ಟನು.


ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು