ಕೀರ್ತನೆಗಳು 55:10 - ಪರಿಶುದ್ದ ಬೈಬಲ್10 ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡುತೊಂದರೆಗಳು ಪ್ರಬಲವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ. ಅಧ್ಯಾಯವನ್ನು ನೋಡಿ |
ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.