ಕೀರ್ತನೆಗಳು 55:14 - ಪರಿಶುದ್ದ ಬೈಬಲ್14 ನಾವು ಜನಸಮೂಹದ ನಡುವೆ ದೇವಾಲಯಕ್ಕೆ ಹೋಗುವಾಗ, ಗುಟ್ಟಾದ ವಿಷಯಗಳನ್ನು ಮಾತಾಡುತ್ತಿದ್ದೆವಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು. ಅಧ್ಯಾಯವನ್ನು ನೋಡಿ |
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.