Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:17 - ಪರಿಶುದ್ದ ಬೈಬಲ್‌

17 ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:17
23 ತಿಳಿವುಗಳ ಹೋಲಿಕೆ  

ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.


ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು.


ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ.


ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.


ಯೇಸು ಜನರನ್ನು ಬೀಳ್ಕೊಟ್ಟ ಮೇಲೆ ಪ್ರಾರ್ಥಿಸುವುದಕ್ಕಾಗಿ ಬೆಟ್ಟದ ಮೇಲಕ್ಕೆ ಹೋದನು.


ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.


ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.


ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.


ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.


ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.


‘ನನಗೆ ಹಿಂಸೆಯಾಗುತ್ತಿದೆ’ ಎಂದು ಕೂಗಿಕೊಂಡರೂ ನನಗೆ ಯಾರೂ ಉತ್ತರ ಕೊಡುತ್ತಿಲ್ಲ. ನಾನು ಸಹಾಯಕ್ಕಾಗಿ ಗಟ್ಟಿಯಾಗಿ ಕೂಗಿಕೊಂಡರೂ ನ್ಯಾಯ ದೊರೆಯುತ್ತಿಲ್ಲ.


ನಮ್ಮ ರಾಜನು ನಿಸ್ಸಹಾಯಕರಿಗೆ ಸಹಾಯ ಮಾಡುವನು. ನಮ್ಮ ರಾಜನು ಬಡವರಿಗೂ ಅಸಹಾಯಕರಿಗೂ ಸಹಾಯ ಮಾಡುವನು.


ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು; ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು. ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು