ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.
ನಿನ್ನ ಎಲ್ಲ ವೈರಿಗಳು ನಿನ್ನನ್ನು ನೋಡಿ ಬಾಯಿ ತೆರೆದು ಸಿಳ್ಳುಹಾಕಿ ಹಲ್ಲು ಕಡಿಯುತ್ತಾರೆ. “ನಾವು ಅವರನ್ನು ಸಂಪೂರ್ಣವಾಗಿ ನುಂಗಿದೆವು! ನಿಜವಾಗಿ ನಾವು ಈ ದಿನವನ್ನೇ ನಿರೀಕ್ಷಿಸುತ್ತಿದ್ದೆವು. ಅಂತೂ ಕೊನೆಗೆ ಇದು ನೆರವೇರುವುದನ್ನು ನಾವು ಕಂಡೆವು” ಎಂದು ಅವರು ಅನ್ನುತ್ತಾರೆ.
ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.
ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.