ಕೀರ್ತನೆಗಳು 56:5 - ಪರಿಶುದ್ದ ಬೈಬಲ್5 ನನ್ನ ವೈರಿಗಳು ನನ್ನ ಮಾತುಗಳಿಗೆ ಅಪಾರ್ಥ ಮಾಡುವರು. ನನಗೆ ಕೇಡುಮಾಡಬೇಕೆಂದೇ ಅವರು ಯಾವಾಗಲೂ ಯೋಚಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಗಲೆಲ್ಲಾ ನನ್ನ ಮಾತುಗಳಿಗೆ ಅಪಾರ್ಥ ಮಾಡುತ್ತಾರೆ; ಅವರು ಬಗೆಯುವದೆಲ್ಲ ನನಗೆ ಕೇಡೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ. ಅಧ್ಯಾಯವನ್ನು ನೋಡಿ |
ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.