Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:1 - ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:1
34 ತಿಳಿವುಗಳ ಹೋಲಿಕೆ  

ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.


ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.


ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.


ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.


ನೀನು ಮಾಡಿದ ಎಲ್ಲ ಸತ್ಕಾರ್ಯಕ್ಕೆ ಯೆಹೋವನು ನಿನಗೆ ಸಂಪೂರ್ಣ ಪ್ರತಿಫಲ ಕೊಡುವನು; ಯಾಕೆಂದರೆ ನೀನು ಯಾವಾತನ ಆಶ್ರಯವನ್ನು ಕೋರಿ ಬಂದಿರುವಿಯೋ ಆತನು ನಿನ್ನನ್ನು ರಕ್ಷಿಸುತ್ತಾನೆ” ಎಂದು ಸಮಾಧಾನ ಪಡಿಸಿದನು.


ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ ಹೋಗಿ ಕದಮುಚ್ಚಿರಿ. ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ.


ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.


ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.


ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.


ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.


“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.


ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ?


ಆದರೆ ಸ್ವಲ್ಪ ಸಮಯದ ನಂತರ ನನ್ನ ಸಿಟ್ಟು ತಣ್ಣಗಾಗುವದು. ಅಶ್ಶೂರವು ಸಾಕಷ್ಟು ನಿಮ್ಮನ್ನು ಶಿಕ್ಷಿಸಿದನೆಂದು ನಾನು ತೃಪ್ತಿಗೊಳ್ಳುವೆನು.”


ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.


ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.


“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.


ದಾವೀದನು ಗವಿಯಿಂದ ಹೊರಗೆ ಬಂದನು. ದಾವೀದನು ಸೌಲನಿಗೆ, “ಅರಸನೇ, ನನ್ನ ಒಡೆಯನೇ!” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ,


‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ. ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.


ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.


ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!


ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತುತಿಸುವೆವು; ಯಾಕೆಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು