Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:10 - ಪರಿಶುದ್ದ ಬೈಬಲ್‌

10 ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ನಿನ್ನ ಕೃಪೆಯು ಆಕಾಶವನ್ನೂ ನಿನ್ನ ಸತ್ಯತೆಯು ಮುಗಿಲನ್ನೂ ನಿಲುಕುವಷ್ಟು ದೊಡ್ಡವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:10
11 ತಿಳಿವುಗಳ ಹೋಲಿಕೆ  

ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.


ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.


ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.


ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು